Bangalore Guinness Record | ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿದ ಬೆಂಗಳೂರು..!

ಬೆಂಗಳೂರು |  ಜಲ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮಾರ್ಚ್ 21 ರಿಂದ 28 2025ರ ವರೆಗೆ ನಡೆದ “ಜಲ ಸಂರಕ್ಷಣೆ ಅಭಿಯಾನ ಸಪ್ತಾಹ”ದಲ್ಲಿ 5,33,642 ಜನರು ಪ್ರತಿಜ್ಞೆ ಸ್ವೀಕರಿಸುವ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಐತಿಹಾಸಿಕ ಸಾಧನೆ (Bangalore Guinness Record) ಮಾಡಿದೆ.

ಗಿನ್ನೆಸ್ ವರ್ಲ್ಡ್ ರೆಕಾರ್ಡ್ (Bangalore Guinness Record)  ಪ್ರಮಾಣ ಪತ್ರ ವಿತರಣೆ

ಈ ಸಾಧನೆಯ ಹಿನ್ನೆಲೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ತೀರ್ಪುಗಾರ ಸ್ವಪನಿಲ್ ದಂಗರಿಕರ್ ಅವರು, ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ನಡೆದ ವಿಶೇಷ ಸಮಾರಂಭದಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ ವಿತರಿಸಿದರು.

ಇದನ್ನು ಓದಿ : Muslim Personal Law | ಮುಸ್ಲಿಂ ಕಾನೂನಿನ ಪ್ರಕಾರ ತಂದೆ ಆಸ್ತಿಯಲ್ಲಿ ಯಾರಿಗೆಲ್ಲಾ ಪಾಲು ಇದೆ..?

ಈ ಸಂದರ್ಭದಲ್ಲಿ BWSSB ಅಧ್ಯಕ್ಷ ಡಾ. ರಾಮ್ ಪ್ರಸಾದ್ ಮನೋಹರ್, FKCCI ಅಧ್ಯಕ್ಷ ಎಂ. ಜಿ. ಬಾಲಕೃಷ್ಣ, KASSIA ಅಧ್ಯಕ್ಷ ಎಂ. ಜಿ. ರಾಜಗೋಪಾಲ್, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಅಭಿಯಾನದ ಯಶಸ್ಸು ರಾಜ್ಯದ ಜನರ ಜಲ ಸಂರಕ್ಷಣೆಯ ಬಗ್ಗೆ ಹೆಚ್ಚುತ್ತಿರುವ ಕಾಳಜಿಯನ್ನೂ ಪ್ರತಿಬಿಂಬಿಸುತ್ತದೆ. BWSSB ಇತ್ತೀಚೆಗೆ ‘ನೀರು ಉಳಿಸಿ, ಭವಿಷ್ಯ ಉಳಿಸಿ’ ಎಂಬ ಘೋಷಣೆಯೊಂದಿಗೆ ಹಲವಾರು ಜನಸಾಮಾನ್ಯರ ಪ್ರಭಾವಿತ ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

Leave a Reply

Your email address will not be published. Required fields are marked *