ರಾಮನಗರ | ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಹೆಸರು ಬದಲಾವಣೆ ಮಾಡಿದರೂ, ಯಾರ ಹೆಸರನ್ನೂ ಕಿತ್ತುಕೊಳ್ಳಲಾಗಿಲ್ಲ. ಇದು ನಮ್ಮ ಹೆಸರನ್ನು ಉಳಿಸಿಕೊಂಡಿರುವಂತಾಗಿದೆ. ಕೆಲವರು ಟೀಕಿಸುತ್ತಿದ್ದಾರೆ, ಅವರಿಗೆ ಉತ್ತರ ನೀಡಬೇಕಾಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಬದಲಾವಣೆಯಿಂದ ಅಭಿವೃದ್ಧಿ
ಈ ಬಗ್ಗೆ ಮಾತನಾಡಿದ ಅವರು, ರಾಮನಗರ ಕ್ಷೇತ್ರಕ್ಕೆ ಈಗಾಗಲೇ ₹1000 ಕೋಟಿ ಅನುದಾನ ನೀಡಲಾಗಿದೆ. ಚನ್ನಪಟ್ಟಣ ಉಪಚುನಾವಣೆಯ ಸಮಯದಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ. ಹಾರೋಹಳ್ಳಿ, ಕೋಡಹಳ್ಳಿ, ಸಾತನೂರು ಮಾರ್ಗಗಳಲ್ಲಿ ರಸ್ತೆ ಅಗಲೀಕರಣದಿಂದ ಆಸ್ತಿ ಮೌಲ್ಯವೂ ಹೆಚ್ಚಾಗಿದೆ ಎಂದು ಹೇಳಿದರು.
ಇದನ್ನು ಓದಿ : Finance Commission | ಅನುದಾನ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ
ನಾನು ಈ ಹಿಂದೆ ಬೆಂಗಳೂರು ಗ್ರಾಮಾಂತರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಸುರೇಶ್ ಅವರು ಬೆಂಗಳೂರು ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ಸಂಸತ್ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಕರೆಯಲಾಗುತ್ತದೆ. ಎಲ್ಲಿಂದ ಎಲ್ಲಿಗೆ ಹೋದರು ಅಮೇರಿಕಾ ಎನ್ನುತ್ತಾರೆ. ಅದೇ ರೀತಿ ಇದೂ ಕೂಡ ಬೆಂಗಳೂರು ಎಂದು ಹೇಳಿದರು.

ಉತ್ತಮವಾಗಿ ನೂತನ ಕೃಷಿ ಕಾಲೇಜು ನಿರ್ಮಿಸಲಾಗುತ್ತಿದೆ. 500 ವಿದ್ಯಾರ್ಥಿಗಳ ಸಾಮರ್ಥ್ಯದ ಹಾಸ್ಟೆಲ್ ಹಾಗೂ ಆಡಳಿತ ಭವನ ಕೂಡ ಈಗಲೇ ನಿರ್ಮಿಸಲು ಯೋಜನೆ ರೂಪಿಸಿ. ಸಾಲ ಸೌಲಭ್ಯ ಒದಗಿಸುವ ಜವಾಬ್ದಾರಿ ನನ್ನದು ಎಂದರು. ಈಗಾಗಲೇ ವಾಸ್ತುಶಿಲ್ಪಿಗಳೊಂದಿಗೆ ಚರ್ಚೆ ನಡೆಸಿ ವಿನ್ಯಾಸ ಬದಲಾವಣೆ ಸೂಚಿಸಲಾಗಿದೆ ಎಂದು ತಿಳಿಸಿದರು.
One thought on “Bengaluru South District | ಜಿಲ್ಲೆಯ ಹೆಸರು ಬದಲಾವಣೆಯಿಂದ ಜನ ಜೀವನ ಬದಲಾವಣೆ”