Inter Caste Marriage | ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು – ಸಿದ್ದರಾಮಯ್ಯ

ದಾವಣಗೆರೆ | ಜಾತ್ಯತೀತ ಸಮಾಜವನ್ನು ನಿರ್ಮಿಸಲು ಅಂತರ್ಜಾತಿ (Inter Caste Marriage) ಹಾಗೂ ಸಾಮೂಹಿಕ ವಿವಾಹಗಳು ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಂತರ್ಜಾತಿ ವಿವಾಹಗಳ (Inter Caste Marriage) ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದ ಅವರು, ಲಿಂಗ ತಾರತಮ್ಯ ಹಾಗೂ ಜಾತಿ ಭೇದಭಾವ ನಿವಾರಣೆ ಆಗಬೇಕಾದರೆ ಇಂತಹ ಸಾಮೂಹಿಕ ಹಾಗೂ ಅಂತರಜಾತಿ ವಿವಾಹಗಳ ಸಂಖ್ಯೆ ಹೆಚ್ಚಾಗಬೇಕಾಗಿದೆ. ಈ ಮೂಲಕ ಸಮಾಜದಲ್ಲಿ ಸಮಾನತೆ, ಭದ್ರತೆ ತರುತ್ತದೆ ಎಂದು ಅವರು ಹೇಳಿದರು.

ಇದನ್ನು ಓದಿ : Caste Survey | ಸಾಮಾಜಿಕ ನ್ಯಾಯಕ್ಕಾಗಿ ಮರುಸಮೀಕ್ಷೆ ಅಗತ್ಯ – ಸಿದ್ದರಾಮಯ್ಯ

ಜಾತಿ, ವರ್ಗವಿಲ್ಲದ ಸಮಾಜವನ್ನು ನಿರ್ಮಿಸುವುದು ಬಸವಣ್ಣ ಹಾಗೂ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರವೂ ಇದೇ ಮಾರ್ಗದಲ್ಲಿ ಸಾಗಿ, ಸಾಮಾಜಿಕ ಸಮಾನತೆ ಮತ್ತು ನ್ಯಾಯ ನೀಡಲು ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಶಾಮನೂರು ಶಿವಶಂಕರಪ್ಪರ ಆರೋಗ್ಯದ ಬಗ್ಗೆ ಮಾತನಾಡಿದ ಅವರು, ಅವರು ಸಂಪೂರ್ಣ ಆರೋಗ್ಯದಿಂದ ಇರುತ್ತಾರೆ, ಶತಾಯುಷಿಯಾಗಲಿ. ಅವರ ಉತ್ಸಾಹ, ಕ್ರಿಯಾಶೀಲತೆ ನೋಡಿ ಮತ್ತೆ ಚುನಾವಣೆಗೆ ನಿಲ್ಲಬಹುದೆನಿಸುತ್ತದೆ. ಪಕ್ಷವೂ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *