ತುಮಕೂರು | ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಈ ಘರ್ಷಣೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಸ್ತೆ ಅಪಘಾತಕ್ಕೆ (Road Accident) ಅತಿ ವೇಗದ ಚಾಲನೆ ಕಾರಣ
ಅಪಘಾತದಲ್ಲಿ ಗೌರಿಬಿದನೂರು ಮೂಲದ ಅಕ್ತರ್ ಜಾನ್ ಸ್ಥಳದಲ್ಲಿಯೇ ಮೃತರಾಗಿದ್ದು, ಶೇಕ್ ಮಹಮ್ಮದ್ ಆಸ್ಪತ್ರೆ ತಲುಪುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಪರಹಾನ್ ಶಮೀರ್ ಮತ್ತು ಮುಫಿತ್ ಎಂಬವರು ಬೆಂಗಳೂರು ಯಲಹಂಕದ ಕೆಕೆ ಆಸ್ಪತ್ರೆಯಲ್ಲಿ ಗಂಭೀರ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಓದಿ : Justice For Men | ಮಹಿಳೆಯಿಂದ ಪುರುಷ ಅನುಭವಿಸುವ ದೌರ್ಜನ್ಯಕ್ಕೆ ಯಾವ ಕಾನೂನು..?
ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವ ಸಮಯದಲ್ಲಿ, ಮಾರ್ಗಸೂಚಿ ಹಾಗೂ ಎಚ್ಚರಿಕೆಗೆ ವ್ಯತಿರಿಕ್ತವಾಗಿ ಅತಿ ವೇಗದಲ್ಲಿ ಬರುತ್ತಿದ್ದ ವಿಜಯಾನಂದಿ ಬಸ್ ಹಾಗೂ ಮಹೀಂದ್ರಾ ಕಾರು ನಡುವೆ ಡಿಕ್ಕಿ (Road Accident) ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಅನಿಲ್ ಮತ್ತು ಪಿಎಸ್ಐ ಕೀರ್ತಿಶ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸುತ್ತಿದ್ದಾರೆ.