ಬೆಂಗಳೂರು | ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯ (Karnataka Rain Alert) ಮುನ್ಸೂಚನೆ ಹೊರಬಿದ್ದಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಜಾರಿಗೊಳಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಜುಲೈ 23 ರಿಂದ 29 ರವರೆಗೆ ವ್ಯಾಪಕ ಮಳೆ ನಿರೀಕ್ಷೆಯಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
ಹೆಚ್ಚಾದ ಮಳೆಯಿಂದ (Karnataka Rain Alert) ರೆಡ್ ಅಲರ್ಟ್ ಘೋಷಣೆ
ಮಂಗಳೂರು ತಾಲೂಕಿನಾದ್ಯಂತ ಜುಲೈ 24 ರಂದು ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೀನುಗಾರರಿಗೆ ಸಮುದ್ರ ಪ್ರವೇಶ ನಿರ್ಬಂಧಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೂ ಇದೇ ರೀತಿಯ ರೆಡ್ ಅಲರ್ಟ್ ಹಿನ್ನೆಲೆ, ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಐಟಿಐ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ತಿಳಿಸಿದ್ದಾರೆ. ಪದವಿ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ.
ಇದನ್ನು ಓದಿ : KSRTC Accident | ಮಗುವಿನ ಜನನ ಪ್ರಮಾಣ ಪತ್ರ ತರಲು ಹೋಗಿ ಸಾವು ತಂದು ಕೊಂಡ ಯುವಕ
ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಯ ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ಮೈಸೂರು ಸೇರಿದಂತೆ ಹಲವೆಡೆ ಜುಲೈ 23 ರಿಂದ 26ರ ವರೆಗೆ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ಹಗುರ ಮಳೆಯ (Karnataka Rain Alert) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.