Site icon Kannada Sakshi | Kannada News | ಕನ್ನಡ ಸುದ್ದಿ | Latest Karnataka News

Monsoon Rains | ಕರಾವಳಿಯಲ್ಲಿ ಮಳೆಯ ಅಬ್ಬರ : ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ (Monsoon Rains) ಅಬ್ಬರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು (ಮೇ 30) ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನು ಓದಿ : Communal violence | ಕೋಮು ಹಿಂಸೆಗೆ ತತ್ತರಿಸಿದ ಕರಾವಳಿ : ಅಲರ್ಟ್ ಮೂಡ್ ನಲ್ಲಿ ಸರ್ಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಉಡುಪಿಯಲ್ಲಿಯೂ ಅಂಗನವಾಡಿ ಕೇಂದ್ರಗಳು ಮತ್ತು 1 ರಿಂದ 10ನೇ ತರಗತಿ ತನಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ಮಳೆಯ (Monsoon Rains) ಹಿನ್ನಲೆ ಜಾಗೃತಿ ಮತ್ತು ಮುನ್ನೆಚ್ಚರಿಕೆ ಕ್ರಮ

ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದು, ನದಿತೀರ, ಸಮುದ್ರ ತೀರ, ಜಲಪಾತ ಹಾಗೂ ತಗ್ಗು ಪ್ರದೇಶಗಳಿಗೆ ಹೋಗದಂತೆ ಮನವಿ ಮಾಡಿದೆ. ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು ಈ ಪ್ರದೇಶಗಳಲ್ಲಿ ಫೋಟೋ ಅಥವಾ ವೀಡಿಯೋ ತೆಗೆಯುವ ಮೂಲಕ ಅಪಾಯದಲ್ಲಿರಬಾರದು ಎಂದು ತಿಳಿಸಲಾಗಿದೆ.

ತುರ್ತು ಪರಿಸ್ಥಿತಿಗಳಲ್ಲಿ ಸಹಾಯಕ್ಕಾಗಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077, ದಕ್ಷಿಣ ಕನ್ನಡದವರು 0824-2442590, ಉಡುಪಿ ಜಿಲ್ಲೆಗೆ ಸೇರಿದವರು 0820-2574802 ಗೆ ಕರೆ ಮಾಡಬಹುದಾಗಿದೆ.

ಭಾರೀ ಮಳೆಯ (Monsoon Rains) ಕಾರಣದಿಂದಾಗಿ ಕೆಲವು ನದಿಗಳು ತುಂಬಿ ಹರಿಯುವ ಸಾಧ್ಯತೆ ಇದ್ದು, ಜಲಾಶಯಗಳ ಹತ್ತಿರ ಅಪಾಯದ ಸಾಧ್ಯತೆ ಹೆಚ್ಚಾಗಿದೆ. ಪರಿಣಾಮವಾಗಿ ಜಿಲ್ಲಾಡಳಿತ ಅಧಿಕಾರಿಗಳಿಗೆ ತಹಶೀಲ್ದಾರ್‌ಗಳಿಂದ ಹಿಡಿದು ನೋಡಲ್ ಅಧಿಕಾರಿಗಳವರೆಗೂ ಕಚೇರಿಗಳಲ್ಲೇ ಉಳಿಯುವಂತೆ ಸೂಚನೆ ನೀಡಿದೆ.

ಮಕ್ಕಳ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಈ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದೆ. ಜನರು ಸಹಕಾರ ನೀಡುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Exit mobile version