ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರು ದಸರಾ (Mysuru Dasara) ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಈ ನಡುವೆ, ಮೈಸೂರಿನಲ್ಲಿ ನಡೆಯಲಿರುವ ಈ ಬಾರಿ ದಸರಾ ಉತ್ಸವದಲ್ಲಿ “ಏರ್ ಶೋ” ಆಯೋಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿ ಸಲ್ಲಿಸಿದರು.
ದಸರಾ (Mysuru Dasara) ಏರ್ ಶೋ ಆಯೋಜನೆಗೆ ರಾಜನಾಥ್ ಸಿಂಗ್ ಒಪ್ಪಿಗೆ
ಈ ಕುರಿತಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರು ದಸರಾ (Mysuru Dasara) ಉತ್ಸವದ ಅಂಗವಾಗಿ ಏರ್ ಶೋ ನಡೆಸಲು ನಾವು ಮನವಿ ಮಾಡಿದ್ದೆವು. ರಕ್ಷಣಾ ಸಚಿವರು ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಇದನ್ನು ಓದಿ : Student Suicide | ಮೊರಾರ್ಜಿ ವಸತಿ ಶಾಲೆಯಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ..!
ಉತ್ತರ ಪ್ರದೇಶ, ತಮಿಳುನಾಡಿನಲ್ಲಿ ಈಗಾಗಲೇ ಡಿಫೆನ್ಸ್ ಕಾರಿಡಾರ್ ಇದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ನಾವು ಮನವಿ ಸಲ್ಲಿಸಿದ್ದೇವೆ ಎಂದು ವಿವರಿಸಿದರು. ಹಾಗೇ, ರಾಜ್ಯದ ವಿವಿಧ ಯೋಜನೆಗಳಿಗೆ ಬೇಕಾದ ಭೂಮಿ, ವಿಶೇಷವಾಗಿ ಸುರಂಗ ಮಾರ್ಗ ಯೋಜನೆ, ಲಿಂಕ್ ರಸ್ತೆ ಯೋಜನೆ, ಏರ್ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕ್ಕರ್ ರಸ್ತೆ ಯೋಜನೆ ಈ ಎಲ್ಲಾ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಜುಲೈ 10 ರಂದು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾಗಿ ಇನ್ನಷ್ಟು ಯೋಜನೆಗಳ ಬಗ್ಗೆ ಚರ್ಚಿಸಲು ನಾವು ಅವಕಾಶ ಕೇಳಿದ್ದೇವೆ. ಅವರು ಅವಕಾಶ ನೀಡಿದರೆ ನಾಳೆಯೇ ಭೇಟಿಯಾಗುತ್ತೇವೆ ಎಂದು ಸಿಎಂ ಹೇಳಿದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಕೂಡ ಭೇಟಿಯಾಗಲು ಸಮಯ ಕೇಳಲಾಗಿದೆ. ಅವರು ಸಮಯ ಕೊಟ್ಟರೆ ಅವರನ್ನೂ ಭೇಟಿಯಾಗುತ್ತೇವೆ ಎಂದರು.
One thought on “Mysuru Dasara | ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಫುಲ್ ಖುಷ್”