Rain Alert | ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..?

ಬೆಂಗಳೂರು | ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ (Rain Alert) ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಜೂನ್ 26, ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಕೆಲವಡೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.

ಮಳೆ (Rain Alert) ಹಿನ್ನಲೆ ರಜೆ ಘೋಷಣೆಗೊಂಡ ಜಿಲ್ಲೆಗಳು ಮತ್ತು ವಿವರ

ಕೊಡಗು ಜಿಲ್ಲೆ: ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಣೆ ಮಾಡಿದ್ದಾರೆ.

ಹಾಸನ ಜಿಲ್ಲೆ: ಹಾಸನ, ಸಕಲೇಶಪುರ, ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಡಿಸಿ ಲತಾ ಕುಮಾರಿ ರಜೆ ಘೋಷಣೆ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ: ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್ ಪುರ ತಾಲೂಕುಗಳಲ್ಲಿಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಡಿಸಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿದ್ದಾರೆ.

ಇದನ್ನು ಓದಿ : AI In Business | ಬಿಸಿನೆಸ್ ನಲ್ಲಿ ಎಐ ಬಳಕೆ ಯಾಕೆ ಮಾಡ್ಬೇಕು ಅಂದ್ರೆ..?

ಉತ್ತರ ಕನ್ನಡ ಜಿಲ್ಲೆ: ಜೋಯಿಡಾ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಶಾಲೆಗಳಿಗೆ  ಡಿಸಿ ಲಕ್ಷ್ಮೀಪ್ರಿಯಾ ರಜೆ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ: ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕುಗಳಲ್ಲಿಎಲ್ಲ ರೀತಿಯ ಶಾಲಾ-ಕಾಲೇಜುಗಳಿಗೆ ಡಿಸಿ ಮೊಹಮ್ಮದ್ ರೋಷನ್ ರಜೆ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ: ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ,ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಣೆಯಲ್ಲಿ ಇರುತ್ತವೆ ಎಂದು ತಿಳಿಸಲಾಗಿದೆ.

ಪೋಷಕರು ಮತ್ತು ವಿದ್ಯಾರ್ಥಿಗಳು ಸ್ಥಳೀಯ ಶಿಕ್ಷಣ ಇಲಾಖೆ ಅಥವಾ ಶಾಲೆ-ಕಾಲೇಜುಗಳಿಂದ (Rain Alert) ಅಧಿಕೃತ ಮಾಹಿತಿ ಪಡೆದುಕೊಳ್ಳಬೇಕು. ಸುರಕ್ಷಿತವಾಗಿ ಮನೆಗಳಲ್ಲಿ ಉಳಿಯಬೇಕು, ಅನಾವಶ್ಯಕ ಪ್ರಯಾಣ ಬೇಡ ಎಂದು ತಿಳಿಸಿದ್ದಾರೆ.

One thought on “Rain Alert | ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..?

Leave a Reply

Your email address will not be published. Required fields are marked *