ಬೆಂಗಳೂರು | ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಆರ್ಸಿಬಿ ವಿಜಯೋತ್ಸವ (RCB celebration Tragedy) ಕಾರ್ಯಕ್ರಮವನ್ನು ನೇರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಹೆಚ್ಚಿಸಲು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಆದರೆ ಇದರ ಪರಿಣಾಮವಾಗಿ ಭೀಕರ ಕಾಲ್ತುಳಿತ ಸಂಭವಿಸಿ 11 ಅಮಾಯಕರ ಜೀವ ಹಾರಿದೆ ಎಂದು ಗಂಭೀರ ಆರೋಪ ಮಾಡಿದರು.
ಆರ್ ಸಿ ಬಿ ದುರಂತಕ್ಕೆ (RCB celebration Tragedy) ಸಿಎಂ, ಡಿಸಿಎಂ ಕಾರಣ
ಬಿಜೆಪಿಯ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ವಿಜಯೇಂದ್ರ, ಈ ದುರ್ಘಟನೆಯ ನೈತಿಕ ಹೊಣೆಗಾರಿಕೆ ಹೊತ್ತು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣವೇ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿ : Environmental Education | ಪರಿಸರ ಸಂರಕ್ಷಣೆಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ..!
ಸರ್ಕಾರದ ಹುಚ್ಚಾಟ ಮತ್ತು ಸಿಎಂ-ಡಿಸಿಎಂ ನಡುವಿನ ಪೈಪೋಟಿಯೇ ಈ ದುರ್ಘಟನೆಗೆ (RCB celebration Tragedy) ಕಾರಣವಾಗಿದೆ. ಜನಜೀವನದ ಮೇಲೆ ಪರಿಣಾಮ ಬೀರುವಷ್ಟು ಅಸಡ್ಡೆಯಾಗಿ ಈ ಸರ್ಕಾರ ನಡೆದುಕೊಂಡಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯ ವೇಳೆ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.
One thought on “RCB celebration Tragedy | ಕಾಂಗ್ರೆಸ್ ಇಮೇಜ್ ಹೆಚ್ಚಿಸಲು 11 ಜನರ ಬಲಿ ಪಡೆದ ಸರ್ಕಾರ..!”