Nelamangala Clash | ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐ ಆರ್

ಬೆಂಗಳೂರು ಗ್ರಾಮಾಂತರ | ಜಿಲ್ಲೆಯ ನೆಲಮಂಗಲ (Nelamangala Clash) ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಓವರ್‌ಟೇಕ್ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಅವರ ಗನ್‌ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನೆಲಮಂಗಲ ಗಲಾಟೆಯಲ್ಲಿ (Nelamangala Clash) ಅನಂತ್ ಕುಮಾರ್ ಹೆಗಡೆ ಲಾಕ್

ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರು ನೀಡಿದ ದೂರಿನಂತೆ ಘಟನೆ ವೇಳೆ ಹೆಗಡೆ ಪುತ್ರ ಹಾಗೂ ಸಿಬ್ಬಂದಿಯವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡವರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ವೇಳೆ ಅನಂತ್ ಕುಮಾರ್ ಹೆಗಡೆ ಕೂಡಾ ಕಾರಿನಲ್ಲಿದ್ದರು ಎಂದು ತಿಳಿದುಬಂದಿದ್ದು, ಅವರನ್ನು ಕೂಡ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಅವರು ಯಾವುದೇ ರೀತಿಯ ಹಲ್ಲೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಓವರ್‌ಟೇಕ್ ಸಂದರ್ಭ ಕಾರಿಗೆ ಕಾರ್ ಟಚ್ ಆಗಿದ್ದು, ಅದರಿಂದ ಗಲಾಟೆ ಆರಂಭವಾಯಿತು ಎಂದು ಹೆಗಡೆ ಹೇಳಿದ್ದಾರೆ.

ಇದನ್ನು ಓದಿ : Revenue Review | ಕಂದಾಯ ಇಲಾಖೆ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಬೈರೇಗೌಡ..!

ಘಟನೆಯ ಸುದ್ದಿ ಹರಡುತ್ತಿದ್ದಂತೆಯೇ ಸಾರ್ವಜನಿಕರು ಪೊಲೀಸ ಠಾಣೆ ಎದುರು ಜಮಾಯಿಸಿದರು. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ ಕೂಡ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.

ಬಿಎನ್ಎಸ್ (ಭಾರತೀಯ ನೈತಿಕ ಸಂಹಿತೆ) ಕಾಯ್ದೆಯ 6 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅನಂತ್ ಕುಮಾರ್ ಹೆಗಡೆ A1, ಗನ್‌ಮ್ಯಾನ್ A2 ಮತ್ತು ಚಾಲಕ A3 ಎಂದು ಗುರುತಿಸಲಾಗಿದೆ.

ಈ ಘಟನೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನು ಉಂಟುಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ವಿಡಿಯೋಗಳು ಹಾಗೂ ಚರ್ಚೆಗಳು ವ್ಯಾಪಕವಾಗಿ ಹರಡುತ್ತಿವೆ.

Leave a Reply

Your email address will not be published. Required fields are marked *