
Yettinahole Project | ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ ಸರ್ಕಾರ..!
ನವದೆಹಲಿ | ಕರ್ನಾಟಕದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ (Yettinahole Project) ಕೇಂದ್ರ ಸರ್ಕಾರದಿಂದ ತೀವ್ರ ಹಿನ್ನಡೆ ಎದುರಾಗಿದೆ. ಯೋಜನೆಗೆ ಅಗತ್ಯವಿದ್ದ 423 ಎಕರೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನೀಡಲು ನಿರಾಕರಿಸಿದೆ. ಈ ನಿರ್ಧಾರದಿಂದಾಗಿ ಯೋಜನೆಯ ಮುಂದಿನ ಹಂತಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 432 ಎಕರೆ ಅರಣ್ಯ ಭೂಮಿಯನ್ನು ‘ಗುರುತ್ವಾಕರ್ಷಣೆ ಕಾಲುವೆ’ ನಿರ್ಮಾಣಕ್ಕಾಗಿ ಬಳಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಈ ವರ್ಷ ಮಾರ್ಚ್ನಲ್ಲಿ ಕೇಂದ್ರ…