
DK Shivakumar | ಮೂರು ದಿನಗಳು ನಾನು ಯಾರನ್ನು ಭೇಟಿ ಮಾಡಲ್ಲ – ಡಿ ಕೆ ಶಿವಕುಮಾರ್
ಬೆಂಗಳೂರು | ಕರ್ನಾಟಕ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ (DK Shivakumar) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಜುಲೈ 22ರಿಂದ ಮೂರು ದಿನಗಳ ಕಾಲ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಅಥವಾ ವ್ಯಕ್ತಿ ಭೇಟಿಯಿಂದ ದೂರ ಉಳಿಯಲಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಡಿಕೆಶಿ ಅವರು ತಮ್ಮ ಪೋಸ್ಟ್ನಲ್ಲಿ, ಇಂದಿನಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರು, ಪಕ್ಷದ ನಾಯಕರು, ಕಾರ್ಯಕರ್ತರು ಯಾರೂ ತಪ್ಪಾಗಿ ಅರ್ಥ ಮಾಡಿಕೊಳ್ಳಬಾರದು ಎಂದು…